ADVERTISEMENT

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 23:30 IST
Last Updated 5 ಅಕ್ಟೋಬರ್ 2024, 23:30 IST
<div class="paragraphs"><p>ವಿಧಾನ ಸೌಧ</p></div>

ವಿಧಾನ ಸೌಧ

   

(ಸಾಂಕೇತಿಕ ಚಿತ್ರ)

ಬೆಂಗಳೂರು: ರಾಜ್ಯ ಪಠ್ಯಕ್ರಮ ಬೋಧನೆಗೆ ಅನುಮತಿ ಪಡೆದ ಖಾಸಗಿ ಶಾಲೆಗಳು ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನೇ ಅನುಸರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತೊಮ್ಮೆ ಸುತ್ತೋಲೆ ಹೊರಡಿಸಿದೆ.

ADVERTISEMENT

ಕರ್ನಾಟಕ ಶಿಕ್ಷಣ ಕಾಯ್ದೆ ಪ್ರಕಾರ ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ಶಾಲೆಗಳೂ ರಾಜ್ಯ ಪಠ್ಯಕ್ರಮ ಹೊರತುಪಡಿಸಿ ಇತರೆ ಯಾವುದೇ ಪಠ್ಯಕ್ರಮ, ಪಠ್ಯಪುಸ್ತಕ ಅನುಸರಿಸುವಂತಿಲ್ಲ, ಹಾಗೆ ಮಾಡಿದರೆ ಅಂತಹ ಶಾಲೆಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಇಲಾಖೆಯ ಆಯುಕ್ತರು ಹೇಳಿದ್ದಾರೆ.

ಕೆಲ ಶಾಲೆಗಳು ಖಾಸಗಿ ಪ್ರಕಾಶಕರಿಂದ ಪಠ್ಯಪುಸ್ತಕ ಖರೀದಿಸುತ್ತಿವೆ. ಕೇಂದ್ರ ಪಠ್ಯಕ್ರಮ ಬೋಧಿಸುತ್ತಿವೆ ಎಂಬ ದೂರುಗಳಿವೆ. ಎಲ್ಲ ಶಾಲೆಗಳು 1ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳ ಮಾಹಿತಿಯನ್ನು ಕಡ್ಡಾಯವಾಗಿ ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ದಾಖಲು ಮಾಡಬೇಕು. ಕರ್ನಾಟಕ ಪಠ್ಯಪುಸ್ತಕ ಸಂಘಕ್ಕೆ ಬೇಡಿಕೆ ಸಲ್ಲಿಸಿ, ಪಠ್ಯಪುಸ್ತಕ ಖರೀದಿಸಬೇಕು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.