ಬೆಂಗಳೂರು: ‘ಕರ್ನಾಟಕದಲ್ಲಿ ನಿತ್ಯ 3,000 ಕೆ.ಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್, ಪಿಪಿಇ ಕಿಟ್, ಕೈ ಗವುಸುಗಳು ಇದರ ಮೂಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
’ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು. ಆದರೆ, ಅದು ಕ್ಲಿಷ್ಟಕರ ಕೂಡಾ. ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆ ರೂಡಿಸಿಕೊಳ್ಳಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಮಾಸ್ಕ್ ಧರಿಸದ ವರನಿಗೆ ₹2,100 ದಂಡ ವಿಧಿಸಿದ ಇಂದೋರ್ ಮಹಾನಗರ ಪಾಲಿಕೆ ಅಧಿಕಾರಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.