ಬೆಂಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ 2018ರ ಸೆಪ್ಟೆಂಬರ್ 3ರಂದು ಹೊರಡಿಸಿದ್ದ ಅಧಿಸೂಚನೆ ವಾಪಸು ಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಈ ಕುರಿತಂತೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು."ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ಸಂಬಂಧ 2018ರ ಸೆಪ್ಟೆಂಬರ್ 3 ರಂದು ಹೊರಡಿಸಲಾದ ಅಧಿಸೂಚನೆ ವಾಪಸು ಪಡೆಯಲು ಸರ್ಕಾರ ನಿರ್ಧರಿಸಿದೆ. ಒಂದು ತಿಂಗಳಲ್ಲಿ ಮೀಸಲಾತಿ ಮರು ನಿಗದಿಗೊಳಿಸಿ ಹೊಸ ಅಧಿಸೂಚನೆ ಹೊರಡಿಸಲಾಗುವುದು" ಎಂದು ಎಜಿ ನ್ಯಾಯಪೀಠಕ್ಕೆ ತಿಳಿಸಿದರು.
ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಮೇಲ್ಮನವಿಗಳನ್ನು ವಿಲೇವಾರಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.