ADVERTISEMENT

ರಾಜ್ಯದ ವಿದ್ಯುತ್‌ ಪ್ರಸರಣ ವ್ಯವಸ್ಥೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 15:25 IST
Last Updated 22 ಜೂನ್ 2024, 15:25 IST
<div class="paragraphs"><p>ವಿದ್ಯುತ್‌ ಪ್ರಸರಣ </p></div>

ವಿದ್ಯುತ್‌ ಪ್ರಸರಣ

   

ನವದೆಹಲಿ: ಕರ್ನಾಟಕ ಹಾಗೂ ರಾಜಸ್ಥಾನದಲ್ಲಿ 9 ಗಿಗಾವಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಹೊಸ ಅಂತರರಾಜ್ಯ ಪ್ರಸರಣ ವ್ಯವಸ್ಥೆಗೆ (ಐಎಸ್‌ಟಿಎಸ್‌) ಕೇಂದ್ರ ವಿದ್ಯುತ್ ಸಚಿವಾಲಯ ಶನಿವಾರ ಅನುಮೋದನೆ ನೀಡಿದೆ. 

ಈ ಯೋಜನೆಗಳನ್ನು ಸುಂಕ ಆಧಾರಿತ ಸ್ಪರ್ಧಾತ್ಮಕ ಬಿಡ್ಡಿಂಗ್ (ಟಿಬಿಸಿಬಿ) ವಿಧಾನದ ಮೂಲಕ ಜಾರಿಗೊಳಿಸಲಾಗುವುದು ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ADVERTISEMENT

ಕರ್ನಾಟಕದಲ್ಲಿ ವಿದ್ಯುತ್ ವ್ಯವಸ್ಥೆಯನ್ನು ಬಲಪಡಿಸುವ ಯೋಜನೆಯು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ 4.5 ಗಿಗಾವಾಟ್‌ ನವೀಕರಿಸಬಹುದಾದ ಇಂಧನವನ್ನು ಉತ್ಪಾದಿಸುವುದಾಗಿದೆ. ಈ ಯೋಜನೆಯ ಅಂದಾಜು ವೆಚ್ಚ ₹1,354 ಕೋಟಿ. ಈ ಯೋಜನೆಯ ಅನುಷ್ಠಾನದ ಅವಧಿ 2027ರ ಜೂನ್‌ ವರೆಗೆ ಇರುತ್ತದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.