ಬೆಂಗಳೂರು: ಜಯಚಾಮರಾಜೇಂದ್ರ ಪಾಲಿಟೆಕ್ನಿಕ್‌ನ 48 ವಿದ್ಯಾರ್ಥಿಗಳು ಒಂದು ವರ್ಷದ ಅಧ್ಯಯನಕ್ಕಾಗಿ ಅಮೆರಿಕದ ಎರಡು ವಿಶ್ವವಿದ್ಯಾನಿಲಯಗಳಿಗೆ ತೆರಳಲಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಮಂಗಳವಾರ ಸಚಿವ ಎಂ.ಸಿ.ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಂತರ ಅಮೆರಿಕಕ್ಕೆ ಕಳುಹಿಸುವ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ಪಾಲಿಟೆಕ್ನಿಕ್ ಮಾಡಿಕೊಂಡ ಒಪ್ಪಂದದಂತೆ ಅಂತರರಾಷ್ಟ್ರೀಯ ಅವಳಿ ಕಾರ್ಯಕ್ರಮದ ಅಂಗವಾಗಿ ಕ್ಯಾಂಪಸ್ ಅಧ್ಯಯನಕ್ಕಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ. ಪ್ರಯಾಣ ಮತ್ತು ವಾಸ್ತವ್ಯ ಸೇರಿದಂತೆ ಪ್ರತಿ ವಿದ್ಯಾರ್ಥಿಗೆ ತಗಲುವ ₹ 20 ಲಕ್ಷ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.