ADVERTISEMENT

ಉಪನಗರ ರೈಲಿಗೆ ಮರಗಳ ಹನನ: ಕೆ–ರೈಡ್‌ಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 17:08 IST
Last Updated 27 ಜುಲೈ 2024, 17:08 IST
<div class="paragraphs"><p>ಮರಗಳ ಹನನ</p></div>

ಮರಗಳ ಹನನ

   

ನವದೆಹಲಿ: ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನದ ಸಂದರ್ಭದಲ್ಲಿ 33 ಸಾವಿರ ಮರಗಳ ಹನನ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಕೆ–ರೈಡ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನೋಟಿಸ್‌ ನೀಡಿದೆ. 

33 ಸಾವಿರ ಮರಗಳನ್ನು ಕಡಿಯುವುದಕ್ಕೆ 2 ಸಾವಿರ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಮೂರ್ತಿ ಪ್ರಕಾಶ್‌ ಶ್ರೀವಾಸ್ತವ ನೇತೃತ್ವದ ಪ್ರಧಾನ ಪೀಠವು, ಪ್ರತಿಕ್ರಿಯೆ ನೀಡಲು ಆರು ವಾರ ಕಾಲಾವಕಾಶ ನೀಡಿದೆ. ಪ್ರಕರಣದ ವಿಚಾರಣೆಯನ್ನು ದಕ್ಷಿಣ ವಲಯ ಪೀಠಕ್ಕೆ ವರ್ಗಾಯಿಸಲಾಗಿದೆ. ಸೆಪ್ಟೆಂಬರ್‌ 11ರಂದು ಮುಂದಿನ ವಿಚಾರಣೆ ನಡೆಯಲಿದೆ. 

ADVERTISEMENT

ಯೋಜನೆಯ ಅನುಷ್ಠಾನದಿಂದ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಸಾರ್ವಜನಿಕ ಸಾರಿಗೆ ಬಳಸುವವರ ಸಂಖ್ಯೆ ಹೆಚ್ಚಲಿದೆ. ಆದರೆ, ಯೋಜನೆಗಾಗಿ ಮರಗಳನ್ನು ಕಡಿಯುವುದು ಸರಿಯಲ್ಲ. ಇದರಿಂದ ಪರಿಸರ ನಾಶವಾಗಲಿದೆ. ಈಗಿರುವ ರೈಲ್ವೆ ಮಾರ್ಗಗಳಲ್ಲಿ ದ್ವಿಪಥ ಹಾಗೂ ಸಿಗ್ನಲಿಂಗ್‌ ಕಾಮಗಾರಿಗಳನ್ನು ನಡೆಸಿದರೆ ಉಪನಗರ ರೈಲುಗಳನ್ನು ಓಡಿಸಲು ಸಾಧ್ಯವಿದೆ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪರಿಸರದ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.