ಬೆಂಗಳೂರು: ಮಂಡ್ಯ, ಮೈಸೂರು ಭಾಗದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಮುಚ್ಚಿರುವುದರಿಂದ ಕಬ್ಬು ಬೆಳೆಗಾರರು ಕಂಗಾಲಾಗಿದ್ದು,ಹೊರ ಜಿಲ್ಲೆ ಮಾತ್ರವಲ್ಲ, ಹೊರ ರಾಜ್ಯಗಳಿಗೆ ಕಬ್ಬು ಸಾಗಣೆಗೆ ತಗಲುವ ವೆಚ್ಚವನ್ನು ಭರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಶನಿವಾರಜೆಡಿಎಸ್ ಸದಸ್ಯ ಕೆ. ಟಿ. ಶ್ರೀಕಂಠೇಗೌಡ ಅವರ ಗಮನ ಸೆಳೆಯುವ ಸೂಚನೆಗೆ ಸ್ಪಂದಿಸಿದ ಅವರು, ಸಾಗಣೆ ವೆಚ್ಚವನ್ನು ಸರ್ಕಾರ ಭರಿಸುವುದು, ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಕುರಿತಂತೆ ಮುಖ್ಯಮಂತ್ರಿಗಳ ಜತೆ ಈಗಾಗಲೇ ಚರ್ಚಿಸಿದ್ದು, ಕೆಲವು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಚರ್ಚಿಸಲಾಗಿದೆ. ಸರ್ಕಾರ ಶೀಘ್ರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
14 ಮತ್ತು 15 ತಿಂಗಳಾಗಿರುವ ಕಬ್ಬನ್ನು ತಕ್ಷಣ ಕಟಾವು ಮಾಡಬೇಕಿದ್ದು, ಸರ್ಕಾರ ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕು ಎಂದು ಎಸ್. ಆರ್. ಪಾಟೀಲ,ಮರಿತಿಬ್ಬೇಗೌಡ ಒತ್ತಾಯಿಸಿದರು. ಮುಚ್ಚಿರುವ ಮೈಶುಗರ್ ಕಂಪನಿಗೆ ವಿಶ್ವೇಶ್ವರಯ್ಯ ಸ್ಥಾಪಿಸಿದ ಕಾರ್ಖಾನೆ ಎಂಬ ಒಂದು ಅಭಿಮಾನ ಬಿಟ್ಟರೆ ಅದಕ್ಕೆ ಹಾಕುವ ದುಡ್ಡು ವ್ಯರ್ಥ. ಕಾರ್ಖಾನೆಗೆಹಾಕಿರುವ ದುಡ್ಡನ್ನು ಲೆಕ್ಕ ಹಾಕಿದರೆ ಮೂರು ಹೊಸ ಕಾರ್ಖಾನೆಗಳನ್ನೇ ತೆರೆಯಬಹುದಿತ್ತು ಎಂಬ ಅಭಿಪ್ರಾಯ
ವ್ಯಕ್ತವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.