ADVERTISEMENT

ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪರಮೇಶ್ವರ್ ನಾಯ್ಕ್‌ಗೆ ಸಮನ್ಸ್

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 15:45 IST
Last Updated 3 ಮಾರ್ಚ್ 2022, 15:45 IST
ಪಿ.ಟಿ. ಪರಮೇಶ್ವರ್‌ ನಾಯ್ಕ
ಪಿ.ಟಿ. ಪರಮೇಶ್ವರ್‌ ನಾಯ್ಕ   

ಬೆಂಗಳೂರು: ಕೋವಿಡ್‌ ನಿಯಮ ಉಲ್ಲಂಘಿಸಿ 2020ರ ಜೂನ್‌ನಲ್ಲಿ ಪುತ್ರನ ಮದುವೆ ಮಾಡಿದ್ದ ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪಿ.ಟಿ. ಪರಮೇಶ್ವರ್‌ ನಾಯ್ಕ ಮತ್ತು ಅವರ ಪುತ್ರ ಪಿ.ಟಿ. ಭರತ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಲುಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಕುರಿತಂತೆ ಸರ್ಕಾರಿಅಧಿಕಾರಿ ಕೆ.ಶ್ರೀಧರ್‌ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ್ದ, 62ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಹಾಗೂ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತ್‌. ಜೆ ಆದೇಶಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188 ಮತ್ತು 269 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯ ಕಲಂ 51(ಬಿ) ಅಡಿ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶಿಸಲಾಗಿದ್ದು, ಮಾರ್ಚ್‌ 21ರಂದು ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಲಾಗಿದೆ.

ADVERTISEMENT

ಹರಪನಹಳ್ಳಿ ತಾಲ್ಲೂಕಿನ ಲಕ್ಷ್ಮೀಪುರದಲ್ಲಿ ನಡೆದಿದ್ದ ಭರತ್‌ ವಿವಾಹದಲ್ಲಿ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕೋವಿಡ್‌ ಮಾರ್ಗಸೂಚಿಯ ಪ್ರಕಾರ 50ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.