ನವದೆಹಲಿ: ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ವಿಧಾನಸಭೆಯ ಸ್ಪೀಕರ್ ರಮೇಶ್‌ಕುಮಾರ್ ಅವರು ಕಳೆದ 28ರಂದು ನೀಡಿರುವ ಆದೇಶದ ಸಿಂಧುತ್ವ ಪ್ರಶ್ನಿಸಿ 9 ಜನ ಶಾಸಕರು ಗುರುವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ನ ಪ್ರತಾಪಗೌಡ ಪಾಟೀಲ, ಬಿ.ಸಿ. ಪಾಟೀಲ, ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್, ಬಿ.ಎ. ಬಸವರಾಜ್, ಮುನಿರತ್ನ, ಜೆಡಿಎಸ್‌ನ ಎಚ್.ವಿಶ್ವನಾಥ್, ಕೆ.ಗೋಪಾಲಯ್ಯ, ಹಾಗೂ ಕೆ.ಸಿ. ನಾರಾಯಣಗೌಡ ಅವರೇ ಕೆ.ಆರ್. ರಮೇಶ್‌ಕುಮಾರ್, ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅವರು ಈ ಮೇಲ್ಮನವಿ ಸಲ್ಲಿಸಿದ್ದಾರೆ.
‘ನಮ್ಮನ್ನು ಅನರ್ಹಗೊಳಿಸಲುಸ್ಪೀಕರ್ ಅನುಸರಿಸಿದ ಎಲ್ಲ ಅಗತ್ಯ ಕ್ರಮಗಳ ಬಗ್ಗೆ ಲಭ್ಯವಿರುವ ದಾಖಲೆಗಳನ್ನು ಅವಲೋಕಿಸಬೇಕು, ಅನರ್ಹತೆ ಆದೇಶವನ್ನು ರದ್ದುಪಡಿಸಿ ಆದೇಶ ಅಥವಾ ನಿರ್ದೇಶನ ನೀಡಬೇಕು, ಮೊದಲೇ ನಾವು ನೀಡಿರುವ ರಾಜೀನಾಮೆ ತಿರಸ್ಕರಿಸಿರುವ ಸ್ಪೀಕರ್ ಕ್ರಮವನ್ನು ರದ್ದುಪಡಿಸಬೇಕು, ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀಡಲಾದ ಆದೇಶವನ್ನು ಈಗಲೂ ಅನ್ವಯಿಸಿ ಆದೇಶ ಹೊರಡಿಸಬೇಕು’ ಎಂದು ಮನವಿ ಮಾಡಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.