ಬೆಂಗಳೂರು: 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಪ್ರಭು ಯಾವುದೇ ಪಕ್ಷಕ್ಕೂ ಪೂರ್ಣ ಬೆಂಬಲ ನೀಡಲಿಲ್ಲ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಗದ್ದುಗೆ ಹಿಡಿಯಲು ಸಾಧ್ಯವಾಗಲಿಲ್ಲ. ನಂತರ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು 14 ತಿಂಗಳಲ್ಲೇ ಸರ್ಕಾರ ಅತಂತ್ರ ಸ್ಥಿತಿಯಲ್ಲಿದೆ. ಅಂದಿನಿಂದ ಇಲ್ಲಿಯವರೆಗೂಸುಪ್ರೀಂಕೋರ್ಟ್ ಅಂಗಳದಲ್ಲಿ ನಡೆದ ರಾಜಕೀಯ ವಿಚಾರಣೆಗಳ ಒಂದು ಡೈಜೆಸ್ಟ್ ಸ್ಟೋರಿ ಇದು.
***
ಸುಪ್ರೀಂ ಕೋರ್ಟ್ ನೆರವಿನ ನಿರೀಕ್ಷೆಯಲ್ಲಿ ‘ದೋಸ್ತಿ’ಗಳು
ಸರ್ಕಾರ ಉಳಿಸಿಕೊಳ್ಳುವ ದಾರಿಗಳು ಮೈತ್ರಿಕೂಟಕ್ಕೆ ಬಹುತೇಕ ಮುಚ್ಚಿದಂತಿದ್ದು, ಸುಪ್ರೀಂಕೋರ್ಟ್ ತಮ್ಮ ನೆರವಿಗೆ ಬರಲಿದೆ ಎಂಬ ಭರವಸೆ ಜೆಡಿಎಸ್–ಕಾಂಗ್ರೆಸ್ ನಾಯಕರಲ್ಲಿ ಇನ್ನೂ ಉಳಿದಿದೆ.
ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರ ಪರ ವಕೀಲ ಮುಕುಲ್ ರೋಹಟಗಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ‘ಇಂದು ವಿಚಾರಣೆ ನಡೆಸುವುದು ಸಾಧ್ಯವಿಲ್ಲ’ ಎಂದು ಹೇಳಿತು.
ಸುಪ್ರೀಂ ಕೋರ್ಟ್‌ಕಾಂಗ್ರೆಸ್ –ಜೆಡಿಎಸ್ ಅರ್ಜಿ
‘ರಾಜೀನಾಮೆ ಸಲ್ಲಿಸಿರುವ 15 ಜನ ಶಾಸಕರು ವಿಧಾನಸಭೆಯ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸುವಂತಿಲ್ಲ. ಅದು ಅವರ ವಿವೇಚನೆಗೆ ಬಿಟ್ಟದ್ದು’ ಎಂಬ ಜುಲೈ 17ರ ಮಧ್ಯಂತರ ಆದೇಶ ಕುರಿತು ಸ್ಪಷ್ಟನೆ ನೀಡುವಂತೆ ಕೋರಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸುಪ್ರೀಂಕೋರ್ಟ್‌ಗೆ ಶುಕ್ರವಾರ ಮೇಲ್ಮನವಿ ಸಲ್ಲಿಸಿವೆ.
ಬಹುಮತ ಇಲ್ಲದೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪಶನಿವಾರ (ಮೇ 19) ವಿಶ್ವಾಸಮತ ಯಾಚಿಸಿದರು.104 ಸ್ಥಾನ ಗೆದ್ದ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲ ವಜುಭಾಯಿ ವಾಲಾ ಆಹ್ವಾನ ನೀಡಿದ್ದರು. ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು 15 ದಿನಗಳ ಗಡುವು ನೀಡಿದ್ದರು. ಆದರೆ, ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್; ಶನಿವಾರ ಸಂಜೆಯೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಬಿಜೆಪಿಗೆ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಮೇರೆಗೆ ಸಿಎಂ ಯಡಿಯೂರಪ್ಪ ವಿಶ್ವಾಸಮತ ಯಾಚಿಸಿದರು. ಬಹುಮತ ಸಿಗದೇ ಅವರು ರಾಜ್ಯಪಾಲರಿಗೆ ರಾಜೀನಾಮೆ ನೀಡಿದರು.
ಯಡಿಯೂರಪ್ಪ ಸರ್ಕಾರವಿದ್ದಾಗ ಆಗಿದ್ದೇನು; ದಶಕದ ಬಳಿಕ ಅದೇ ಸ್ಥಿತಿ ಉಂಟಾಯ್ತಾ?
ನಾನ್ಯಾಕೆ ರಾಜೀನಾಮೆ ನೀಡಲಿ? ಅದರ ಅಗತ್ಯವೇನಿದೆ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, 2008–09ರಲ್ಲಿ ಯಡಿಯೂರಪ್ಪ ಸರ್ಕಾರವಿದ್ದಾಗ ಏನಾಗಿತ್ತು ಎಂದು ಕೇಳಿದರು. ಹಾಗಾದರೆ ಆಗಲೂ ಇದೇ ಸ್ಥಿತಿ ನಿರ್ಮಾಣವಾಗಿತ್ತಾ? ಯಡಿಯೂರಪ್ಪ ಏನು ಮಾಡಿದ್ದರು? ಜುಲೈ 11ರಂದು ಪ್ರಕಟವಾಗಿದ್ದ ಈ ಸುದ್ದಿ ಓದಿದರೆ ಮಾಹಿತಿ ಸಿಗುತ್ತೆ.
‘ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ರಾಜೀನಾಮೆ ಸ್ವೀಕರಿಸದೆ ಸಾಂವಿಧಾನಿಕ ಕರ್ತವ್ಯಕ್ಕೆ ಸ್ಪೀಕರ್ ಚ್ಯುತಿ ತಂದಿದ್ದಾರೆ’ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅತೃಪ್ತ ಶಾಸಕರು ಜುಲೈ 10ರಂದುಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅವರ ದೂರಿನ ವಿವರ ಈ ಸುದ್ದಿಯಲ್ಲಿದೆ.
ಸಂಜೆ 6 ಗಂಟೆ ಒಳಗೆ ವಿಧಾನಸಭಾಧ್ಯಕ್ಷರ ಮುಂದೆ ಹಾಜರಾಗುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ತಂಗಿದ್ದ ಶಾಸಕರು ಆತುರಾತುರವಾಗಿ ಅಲ್ಲಿಂದ ವಿಶೇಷ ವಿಮಾನ ಹತ್ತಿದ್ದರು. ಅಲ್ಲಿಂದ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬರುವ ವೇಳೆಗೆ ಸಮಯ ಸಮೀಪಿಸುವುದು ಕಂಡು ಆತಂಕಕ್ಕೆ ಒಳಗಾದರು. ವಿಶೇಷ ವಿಮಾನದಲ್ಲಿಬಂದ ಶಾಸಕರನ್ನು ಕರೆತರುವ ವ್ಯವಸ್ಥೆಯನ್ನು ಪೊಲೀಸರು ಮಾಡಿದ್ದರು. ವಿಧಾನಸೌಧದ ಬಳಿ ಕಾರಿನಿಂದ ಇಳಿಯುತ್ತಿದ್ದಂತೆ ಸಭಾಕ್ಷರ ಕೊಠಡಿಗೆ ಓಡೋಡಿ ಬಂದರು. 6 ಗಂಟೆ 4 ನಿಮಿಷಕ್ಕೆ ಕಚೇರಿ ತಲುಪಿದರು.
ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆಗೆ ಸಂಬಂಧಿಸಿದ ಪ್ರಕರಣದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು’ ಎಂದು ಸುಪ್ರೀಂಕೋರ್ಟ್ ಜುಲೈ 12ರಂದುಆದೇಶ ನೀಡಿತು.ಸ್ಪೀಕರ್ ಕಾರ್ಯ ವ್ಯಾಪ್ತಿಯ ಪರಿಶೀಲನೆ ಸೇರಿದಂತೆ ಪ್ರಕರಣದಲ್ಲಿ ಅಡಕವಾಗಿರುವ ಸಾಂವಿಧಾನಿಕ ವಿಷಯಗಳ ಬಗ್ಗೆ ವಿಸ್ತೃತ ವಿಚಾರಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ತ್ರಿಸದಸ್ಯ ಪೀಠವು, ಜುಲೈ 16ಕ್ಕೆ ವಿಚಾರಣೆ ಮುಂದೂಡಿತು.
‘ರಾಜೀನಾಮೆ ಸ್ವೀಕರಿಸುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಅತೃಪ್ತ ಶಾಸಕರು ಸಲ್ಲಿಸಿದ್ದ ಮೇಲ್ಮನವಿಯ ಸುದೀರ್ಘ ವಿಚಾರಣೆ ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು. ದೇಶದ ಗಮನ ಸೆಳೆದಿರುವ ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠದೆದುರು ನಡೆದ ವಾದ ಮಂಡನೆ ಮತ್ತು ವಿಚಾರಣೆ ವಿವರ ನೀಡುದ ಸುದ್ದಿ ಇದು.
ಪಕ್ಷಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದು ಪಕ್ಷಾಂತರವನ್ನು ಪ್ರೋತ್ಸಾಹಿಸಲು ಇಲ್ಲವೇ ಪಕ್ಷಾಂತರಿಗಳಿಗೆ ನೆರವಾಗಲು ಅಲ್ಲ. ಅದನ್ನು ಜಾರಿಗೆ ತಂದಿರುವುದು ಪಕ್ಷಾಂತರವನ್ನು ತಡೆಯಲು ಮತ್ತು ಪಕ್ಷಾಂತರಿಗಳನ್ನು ಶಿಕ್ಷಿಸಲು ಎನ್ನುವುದನ್ನು ಬಹಳ ಮಂದಿ ಮರೆತೇ ಬಿಟ್ಟಿದ್ದಾರೆ. ರಾಜೀನಾಮೆ ನೀಡುವುದು ಶಾಸಕರ ಮೂಲಭೂತ ಹಕ್ಕು ಎಂದು ವಾದಿಸುವವರು, ಈ ಕಾಯ್ದೆಯ ಮೂಲ ಆಶಯವನ್ನು ಅರ್ಥಮಾಡಿಕೊಂಡಂತಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.