ಬೆಂಗಳೂರು: ಯುವಕನ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಜೀವ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 18ಕ್ಕೆ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.
ಎಂ.ಎಲ್. ಶಿವಕುಮಾರ್ ದಾಖಲಿಸಿರುವ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಸೋಮವಾರ ಪೂರ್ಣಗೊಳಿಸಿದರು. ಸೂರಜ್ ಪರ ವಕೀಲ ನಿಖಿಲ್ ಕಾಮತ್ ಮತ್ತು ಸಿಐಡಿ ಪರ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ವಾದ ಮಂಡಿಸಿದರು.
ಪ್ರಜ್ವಲ್ ಅರ್ಜಿ ಮುಂದೂಡಿಕೆ: ‘ಮಗುವಿನ ಶಾಲಾ ಶುಲ್ಕ ತುಂಬಲು ಸಹಾಯ ಮಾಡುವ ಭರವಸೆ ನೀಡಿ ಮಹಿಳೆಯ ಮೊಬೈಲ್ ನಂಬರ್ ಸಂಗ್ರಹಿಸಿ ನಂತರ ಆಕೆಯ ಬೆತ್ತಲೆ ವಿಡಿಯೊ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ’ ಎಂಬ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 18ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.