ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 15:43 IST
Last Updated 3 ಜುಲೈ 2024, 15:43 IST
ಸೂರಜ್‌ ರೇವಣ್ಣ
ಸೂರಜ್‌ ರೇವಣ್ಣ   

ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪೊಲೀಸ್‌ ಕಸ್ಟಡಿ ಬುಧವಾರಕ್ಕೆ ಅಂತ್ಯಗೊಂಡ ಕಾರಣ ಸೂರಜ್ ರೇವಣ್ಣ ಅವರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್‌ ನಾಯಕ್‌, ‘ಆರೋಪಿ ಸೂರಜ್‌ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಸಮಯಾವಕಾಶ ಬೇಕು’ ಎಂದು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇದೇ 18ಕ್ಕೆ ವಿಚಾರಣೆ ಮುಂದೂಡಿದರು. ಸೂರಜ್‌ ಪರ ವಕೀಲ ನಿಖಿಲ್‌ ಡಿ.ಕಾಮತ್‌ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.