ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕು ಎಂದು ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.
‘ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು. ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು. ಶ್ರೀಗಳು ಇಡೀ ದೇಶಕ್ಕೇ ಮಾದರಿಯಾಗಿದ್ದವರು.
ಅವರಿಗೆ ಭಾರತರತ್ನ ನೀಡಬೇಕು ಎಂಬುದು ಆರೂವರೆ ಕೋಟಿ ಜನರ ಭಾವನೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.