ಬೆಂಗಳೂರು: ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ಪ್ರತಿಷ್ಠಾನ (ಮಂಗಳೂರು) ನೀಡುವ ‘ಪ್ರೊ.ಎಸ್.ವಿ.ಪಿ. ಪ್ರಶಸ್ತಿ’ಗೆ ಅನುವಾದಕಿ ನೀಳಾದೇವಿ ಆಯ್ಕೆಯಾಗಿದ್ದಾರೆ.
ಪ್ರತಿಷ್ಠಾನದ ಅಧ್ಯಕ್ಷರಾದ ಬಿ.ಎ. ವಿವೇಕ ರೈ ನೇತೃತ್ವದ ಸಮಿತಿಯು ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಉಪಾಧ್ಯಕ್ಷ ಡಾ.ನಾ. ದಾಮೋದರ ಶೆಟ್ಟಿ ಪ‍್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.