ADVERTISEMENT

ಮುಡಾ ಪ್ರಕರಣ: ಸಿಎಂ ವಿರುದ್ಧ ಟಿ.ಜೆ.ಅಬ್ರಹಾಂ ಖಾಸಗಿ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2024, 15:46 IST
Last Updated 12 ಆಗಸ್ಟ್ 2024, 15:46 IST
<div class="paragraphs"><p>ಟಿ.ಜೆ.ಅಬ್ರಹಾಂ</p></div>

ಟಿ.ಜೆ.ಅಬ್ರಹಾಂ

   

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಹಾಗಾಗಿ, ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.

ಈ ದೂರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಮಂಗಳವಾರ (ಆ.13) ಪರಿಶೀಲನೆ ನಡೆಸಲಿದ್ದಾರೆ.

ADVERTISEMENT

‘ಸಿದ್ದರಾಮಯ್ಯ ವಿರುದ್ಧ ಭಾರತೀಯ ದಂಡ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ ವಿವಿಧ ಕಲಂಗಳಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ನಿರ್ದೇಶಿಸಬೇಕು’ ಎಂದು ದೂರುದಾರ ಟಿ.ಜೆ.ಅಬ್ರಹಾಂ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.