ADVERTISEMENT

ನಾಡಗೀತೆ ತಿರುಚಿದವರ ವಿರುದ್ಧ ಕ್ರಮಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಮೇ 2022, 17:42 IST
Last Updated 28 ಮೇ 2022, 17:42 IST
ನಿರ್ಮಲಾನಂದನಾಥ ಸ್ವಾಮೀಜಿ
ನಿರ್ಮಲಾನಂದನಾಥ ಸ್ವಾಮೀಜಿ   

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆ ತಿರುಚಿ ಬರೆದಿರುವವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎನ್ನುವ ಸಂದೇಶ ರವಾನಿಸಬೇಕು ಎಂದು ತಿಳಿಸಿದ್ದಾರೆ.

ಈಚೆಗೆ ಕೆಲವರು ನಾಡಗೀತೆ ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುವಂತಿದೆ. ಅಷ್ಟೇ ಅಲ್ಲ, ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳು ಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆಯಲಾಗಿದೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ. ಇದರಿಂದ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.