ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ‘ಟಾಕಿಂಗ್ ಲ್ಯಾಪ್‌ಟಾಪ್’ ವಿತರಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ನಗರದ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಲ್ಯಾಪ್‌ಟಾಪ್ ವಿತರಣೆಗೆ ಪೀಠ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಅವರು ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದಿಂದ ವಿವರಣೆ ಕೇಳಿತ್ತು.
‘ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ವಿತರಿಸುವ ಯೋಜನೆಗೆ ಅನುದಾನವನ್ನು ಕ್ರಮೇಣ ಕಡಿಮೆ ಮಾಡಲಾಗುತ್ತಿದೆ. 2014–15ರಲ್ಲಿ ₹4 ಕೋಟಿ ನೀಡಲಾಗಿತ್ತು. 2015–16ರಲ್ಲಿ ಅದನ್ನು ₹3.5 ಕೋಟಿಗೆ ಇಳಿಸಲಾಗಿತ್ತು. 2019–20ರಲ್ಲಿ ₹2.4 ಕೋಟಿಗೆ ಇಳಿಸಲಾಗಿದೆ’ ಎಂದು ಅರ್ಜಿದಾರರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.