ADVERTISEMENT

ಕಾಶ್ಮೀರ್ ಫೈಲ್ಸ್ ಸಿನಿಮಾಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2022, 6:29 IST
Last Updated 14 ಮಾರ್ಚ್ 2022, 6:29 IST
ಕಾಶ್ಮೀರ್‌ ಫೈಲ್ಸ್‌ ಚಿತ್ರದಲ್ಲಿ ಅನುಪಮ್‌ ಖೇರ್‌
ಕಾಶ್ಮೀರ್‌ ಫೈಲ್ಸ್‌ ಚಿತ್ರದಲ್ಲಿ ಅನುಪಮ್‌ ಖೇರ್‌   

ಬೆಂಗಳೂರು: ‘ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಒರಾಯನ್ ಮಾಲ್‌ನಲ್ಲಿ ಸಿನಿಮಾ ವೀಕ್ಷಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಚಿತ್ರ ನೋಡಿದ ಬಳಿಕ ಮಾತನಾಡಲು ಆಗುತ್ತಿಲ್ಲ. ಪ್ರತಿಯೊಬ್ಬ ಭಾರತೀಯರು ನೋಡಲೇಬೇಕಾದ ಸಿನಿಮಾ ಇದು. ಆದ್ದರಿಂದ ತೆರಿಗೆ ವಿನಾಯಿತಿ ನೀಡಿ ಸೋಮವಾರವೇ ಆದೇಶ ಹೊರಡಿಸಲಾಗುವುದು’ ಎಂದರು.

ಕಾಶ್ಮೀರ್‌ ಫೈಲ್‌ ಚಿತ್ರಕ್ಕೆತೆರಿಗೆ ವಿನಾಯತಿಯನ್ನು ಹಲವು ರಾಜ್ಯಗಳು ನೀಡಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.