ಬೆಂಗಳೂರು: ಸ್ಥಗಿತಗೊಂಡಿದ್ದ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಕೆಗೆ ಮುಖ್ಯಮಂತ್ರಿ ಸೂಚಿಸಿದ ಬೆನ್ನಲೇ,
ಪ್ರಕ್ರಿಯೆಗಳನ್ನು ಆರಂಭಿಸಲು ಅನುಮತಿ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಪತ್ರ ಬರೆದಿದ್ದಾರೆ.
ಒಂದು ಜಿಲ್ಲೆಯಲ್ಲಿ ನೇಮಕವಾದ ಶಿಕ್ಷಕರು ಮತ್ತೊಂದು ಜಿಲ್ಲೆಗೆ, ಜಿಲ್ಲೆಯ ಒಳಗೆ ವಿವಿಧ ತಾಲ್ಲೂಕುಗಳಿಗೆ ವರ್ಗಾವಣೆ ಪಡೆಯಲು, ಮೂರು ವರ್ಷದ ನಂತರ ವರ್ಗಾವಣೆಗೆ ಮತ್ತೆ ಕೋರಿಕೆ ಸಲ್ಲಿಸಲು ಅವಕಾಶವಾಗಿದೆ.
2023–24ನೇ ಸಾಲಿಗೆ ವರ್ಗಾವಣೆ ಕೋರಿ ಪ್ರಾಥಮಿಕ, ಪ್ರೌಢಶಾಲೆಯ 88,324 ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಆದರೆ, ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಹಾಗೂ ಇತರೆ ಪ್ರಕ್ರಿಯೆಗಳಲ್ಲಿ ತಾಂತ್ರಿಕ ಲೋಪದ ಕಾರಣ ನೀಡಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು.
‘ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆಗೆ ಅವಕಾಶ ನೀಡಿದರೂ, ಹೊಸ ಶೈಕ್ಷ ಣಿಕ ವರ್ಷದ ಆರಂಭದ ಜೂ. 1ರ ನಂತರವೇ ಹೊಸ ಸ್ಥಳಗಳಿಗೆ ತೆರಳುವ ಷರತ್ತಿಗೆ ಒಳಪಟ್ಟು ವರ್ಗಾವಣೆ ಪ್ರಕ್ರಿ ಯೆ ಪೂರ್ಣಗೊಳಿಸಲು ಅನುಮತಿ ನೀಡ ಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.