ADVERTISEMENT

‘ನಕಲಿ ಎನ್‌ಜಿಒ ಪತ್ತೆಗೆ ತಂಡ’

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 19:49 IST
Last Updated 23 ಡಿಸೆಂಬರ್ 2019, 19:49 IST

ವಿಜಯಪುರ: ‘ನಕಲಿ ಸ್ವಯಂ ಸೇವಾ ಸಂಸ್ಥೆಗಳನ್ನು (ಎನ್‌ಜಿಒ) ಪತ್ತೆ ಹಚ್ಚಲು ತಂಡ ರಚಿಸಿ, ಸಮೀಕ್ಷೆ ನಡೆಸಲಾಗುತ್ತಿದೆ. ನಕಲಿ ಎಂಬುದು ಸಾಬೀತಾದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದರು.

‘ಅಂಗನವಾಡಿಗಳಲ್ಲಿ ಬಯೋಮೆಟ್ರಿಕ್‌ ಅಳವಡಿಸುವ ಚಿಂತನೆ ನಡೆದಿದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಗೃಹ, ಶಿಕ್ಷಣ, ಆರೋಗ್ಯ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT