ಬೆಂಗಳೂರು: ನಗರದ ಮಲ್ಲತ್ತಹಳ್ಳಿಯಲ್ಲಿರುವ ಅಂಬೇಡ್ಕರ್ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಅಂಬೇಡ್ಕರ್ ಅವರ 133ನೇ ಜನ್ಮ ದಿನೋತ್ಸವದ ಅಂಗವಾಗಿ ಶುಕ್ರವಾರ (ಏಪ್ರಿಲ್ 13) ರಾಷ್ಟ್ರ ಮಟ್ಟದ ಎಂಟನೇ ‘ತಾಂತ್ರಿಕ ಎಕ್ಸ್ ಪೋ-2024’ ವಸ್ತು ಪ್ರದರ್ಶನ ಆಯೋಜಿಸಲಾಗಿದೆ.
‘ವಸ್ತು ಪ್ರದರ್ಶನದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ನವೀಕರಿಸಬಹುದಾದ ಇಂಧನ, ಕೃತಕ ಬುದ್ದಿಮತ್ತೆ, ಡೇಟಾ ಸೈನ್ಸ್ ಮತ್ತು ಬ್ಲಾಕ್ ಚೈನ್, ಸ್ಮಾರ್ಟ್ ಟೆಕ್ನಾಲಜಿ, 5ಜಿ ಟೆಕ್ನಾಲಜಿ ಸೇರಿದಂತೆ ಹಲವು ನವೀನ ತಾಂತ್ರಿಕ ಅನ್ವೇಷಣೆಯ ಕಾರ್ಯ ಚಟುವಟಿಕೆಯಲ್ಲಿ ತೊಡಗಿರುವ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು, ಮಾಹಿತಿ ತಂತ್ರಜ್ಞಾನ ಸಂಶೋಧಕರು ಆವಿಷ್ಕರಿಸಿರುವ ತಾಂತ್ರಿಕ ಯೋಜನೆಗಳ ಪ್ರದರ್ಶನ ಮಾಡಲಾಗುವುದು’ ಎಂದು ಅಂಬೇಡ್ಕರ್ ತಾಂತ್ರಿಕ ಮಹಾ ವಿದ್ಯಾಲಯದ ಆಡಳಿತ ಮಂಡಳಿ ತಿಳಿಸಿದೆ.
‘ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗಳಿಗೆ ಸವಾಲಾಗಿರುವ ಹಲವು ಸಮಸ್ಯೆಗಳ ಬಗ್ಗೆ ತಾಂತ್ರಿಕ ತಂತ್ರಜ್ಞಾನ ಪರಿಣಿತರಿಂದ ಮಾರ್ಗದರ್ಶನ ನೀಡಲಾಗುವುದು. ಅಲ್ಲದೆ, ವಿವಿಧ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಆವಿಷ್ಕರಿಸಿರುವ ವಿವಿಧ ತಾಂತ್ರಿಕ ಯೋಜನೆಗಳ ಪ್ರದರ್ಶನ ಏರ್ಪಡಿಸಲಾಗಿದೆ. ಈ ಪ್ರದರ್ಶನದಲ್ಲಿ ಆಯ್ಕೆಯಾದ ಉತ್ತಮ ತಾಂತ್ರಿಕ ಯೋಜನೆಗೆ ₹ 1 ಲಕ್ಷ ಬಹುಮಾನ ನೀಡಲಾಗುವುದು’ ಎಂದೂ ಮಂಡಳಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.