ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ವೈದ್ಯರು ರೆಮ್‌ಡಿಸಿವಿರ್ ಬಳಕೆಗೆ ಸೂಚಿಸಿದ್ದಲ್ಲಿ, ಅದರ ಹಂಚಿಕೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಇದಾಗಿದ್ದು, ಕಾಳಸಂತೆಯಲ್ಲಿ ಮಾರಾಟ ಮತ್ತು ಕೃತಕ ಅಭಾವ ಸೃಷ್ಟಿ ತಡೆಯಲು ಕ್ರಮ ಕೈಗೊಂಡಿದ್ದೇವೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಒಂದು ವೇಳೆ ಸೋಂಕಿತ ವ್ಯಕ್ತಿಯ SRF IDಗೆ ರೆಮ್ಡೆಸಿವಿರ್ ಔಷಧ ಹಂಚಿಕೆಯಾಗಿ ಆಸ್ಪತ್ರೆ ಅದನ್ನು ಆ ವ್ಯಕ್ತಿಯ ಚಿಕಿತ್ಸೆಗೆ ಒದಗಿಸದಿದ್ದಲ್ಲಿ ಇದೇ ಲಿಂಕ್ ಮೂಲಕ ಸರ್ಕಾರಕ್ಕೆ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಪಾರದರ್ಶಕ ವ್ಯವಸ್ಥೆಯಿಂದ ಕಾಳಸಂತೆ ಮಾರಾಟಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕೋಣ.
ರೆಮ್‌ಡೆಸಿವಿರ್ ಹಂಚಿಕೆಯಲ್ಲಿ ಪಾರದರ್ಶಕತೆ ತರಲು ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸಲಾಗಿದ್ದು ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂದು SMS ಕಳುಹಿಸಲಾಗುತ್ತದೆ.
ಸಾರ್ವಜನಿಕರು ಕೆಳಗೆ ನೀಡಿರುವ ಲಿಂಕ್ ಮೂಲಕ ತಮಗೆ ಹಂಚಿಕೆಯಾಗಿರುವ ಔಷಧದ ಬಗ್ಗೆ ಮಾಹಿತಿ ಪಡೆಯಬಹುದು.
https://t.co/1wB9AWJSk9
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.