ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ದೂರ ಸಂಪರ್ಕ ಹಬ್ ಆರಂಭಿಸಲು ‘ಟೆಲಿಕಾಂ ಸೆಂಟರ್ ಆಫ್ ಎಕ್ಸಲೆನ್ಸ್’ (ಟಿಸಿಒಯು) ಕಂಪನಿ ಜೊತೆ ಸೋಮವಾರ ಒಪ್ಪಂದ ಮಾಡಿಕೊಂಡಿದೆ.
ಬೆಂಗಳೂರಿನ ಯುಟಿಯು ಪ್ರಾದೇಶಿಕ ಕಚೇರಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕುಲಪತಿ ಎಸ್. ವಿದ್ಯಾಶಂಕರ್, ‘ದೂರಸಂಪರ್ಕ, ಕೃತಕ ಬುದ್ಧಿಮತ್ತೆ, ತಂತ್ರಜ್ಞಾನಗಳು, ಕೃಷಿ ಉಪಕರಣಗಳ ತಂತ್ರಜ್ಞಾನ, ಆರೋಗ್ಯವರ್ಧನೆ ಮತ್ತಿತರ ಪ್ರಮುಖ ಕ್ಷೇತ್ರಗಳಲ್ಲಿ ಆವಿಷ್ಕಾರಗಳ ಕುರಿತು ಅತ್ಯಾಧುನಿಕ ಸಂಶೋಧನೆ ನಡೆಸಲು ಒಪ್ಪಂದ ಸಹಕಾರಿಯಾಗಲಿದೆ’ ಎಂದರು.
ವಿಶ್ವವಿದ್ಯಾಲಯದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಎದುರಿಸುವ ತಾಂತ್ರಿಕ ಸವಾಲುಗಳನ್ನು ಪರಿಹರಿಸಲು, ಸಂಶೋಧನಾ ಪರಿಸರ ವ್ಯವಸ್ಥೆ ಬಲಗೊಳಿಸಲೂ ಅನುಕೂಲವಾಗಲಿದೆ ಎಂದು ಹೇಳಿದರು.
ಟಿಸಿಒಯು ನಿರ್ದೇಶಕ ವಿನೋದ್ ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.