ADVERTISEMENT

ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜು ಶುಲ್ಕ ಶೇ 10 ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 16:33 IST
Last Updated 17 ಆಗಸ್ಟ್ 2024, 16:33 IST
ವೈದ್ಯಕೀಯ
ವೈದ್ಯಕೀಯ    

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 10ರಷ್ಟು ಶುಲ್ಕ ಹೆಚ್ಚಳ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಸಮ್ಮತಿಸಿದೆ.

ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಪ್ರತಿನಿಧಿಗಳು ಶೇ 15ರಿಂದ ಶೇ 20ರವರೆಗೆ ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿದ್ದವು. ಆದರೆ, ಶೇ 10ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಂಚಿಕೆ ಮಾಡುವ ಸರ್ಕಾರಿ ಕೋಟಾದ ಸೀಟುಗಳಿಗೆ ₹1.40 ಲಕ್ಷ ಹಾಗೂ ಖಾಸಗಿ ಕೋಟಾದ ಸೀಟುಗಳಿಗೆ ₹11.88 ಲಕ್ಷ ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.

ಕಳೆದ ವರ್ಷ ಈ ಶುಲ್ಕ ಕ್ರಮವಾಗಿ  ₹1.28 ಲಕ್ಷ ಹಾಗೂ ₹9.94 ಲಕ್ಷ ಇತ್ತು. ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕದಲ್ಲಿ ಯಾವುದೇ ಬದಲಾವಣೆ ಇಲ್ಲ. ವಾರ್ಷಿಕ ₹50 ಸಾವಿರವೇ ಇರಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.