ADVERTISEMENT

3 ಪಾಲಿಕೆಗಳಿಗೆ ಕೂಡಲೇ ಚುನಾವಣೆ ನಡೆಸಿ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 19:57 IST
Last Updated 17 ಡಿಸೆಂಬರ್ 2020, 19:57 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಹುಬ್ಬಳ್ಳಿ–ಧಾರವಾಡ, ಕಲಬುರ್ಗಿ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಹೈಕೋರ್ಟ್ ನಿರ್ದೇಶನ ನೀಡಿದೆ.

ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್‌ಬಿ) ಚುನಾವಣೆ ಬಾಕಿ ಇರುವ ಕುರಿತು ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಮೂರು ಮಹಾನಗರ ಪಾಲಿಕೆಗಳಿಗೆ ವಾರ್ಡ್ ಮರು ವಿಂಗಡಣೆ, ಮೀಸಲು ಅಧಿಸೂಚನೆ, ಮತದಾರರ ಪಟ್ಟಿ ಮತ್ತು ವೇಳಾಪಟ್ಟಿ ಪ್ರಕಟಿಸಿ ನಂತರ 45 ದಿನಗಳಲ್ಲಿ ಚುನಾವಣೆ ನಡೆಸಬೇಕು’ ಎಂದು ಆದೇಶಿಸಿದೆ.

ರಾಜ್ಯದ 10 ನಗರಸಭೆ, 6 ಪುರಸಭೆ ಮತ್ತು 2 ಪಟ್ಟಣ ಪಂಚಾಯಿತಿಗಳಲ್ಲಿ ಚುನಾವಣೆ ಬಾಕಿ ಇದೆ ಎಂದು ಆಯೋಗ ನ್ಯಾಯಾಲಯಕ್ಕೆ ಮಾಹಿತಿ ನೀಡಿತು. ಬೆಳಗಾವಿ ಮತ್ತು ಕಲಬುರ್ಗಿ ‌ಪಾಲಿಕೆಗಳ ಅವಧಿ ಕ್ರಮವಾಗಿ 2019 ಮಾ.9 ರಂದು ಮತ್ತು 2019ರ ಏಪ್ರಿಲ್ 4 ರಂದು ಕೊನೆಗೊಂಡಿದೆ ಎಂದು ವಿವರಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.