ADVERTISEMENT

ಧ್ವನಿವರ್ಧಕ ಪರವಾನಗಿ: ಗರಿಷ್ಠ ಶುಲ್ಕ ₹450 ನಿಗದಿಪಡಿಸಿದ ಗೃಹ ಇಲಾಖೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 19:31 IST
Last Updated 5 ಜೂನ್ 2022, 19:31 IST
ಧ್ವನಿವರ್ಧಕ
ಧ್ವನಿವರ್ಧಕ   

ಬೆಂಗಳೂರು: ಒಂದು ತಿಂಗಳಿಗಿಂತ ಹೆಚ್ಚಿನ ಅವಧಿಗೆ ಧ್ವನಿವರ್ಧಕ ಬಳಕೆಗೆ ಪರವಾನಗಿ ನೀಡಲು ಗರಿಷ್ಠ ₹ 450 ಶುಲ್ಕ ನಿಗದಿಪಡಿಸಿ ಗೃಹ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಧ್ವನಿವರ್ಧಕಗಳ ಬಳಕೆ ನಿಯಂತ್ರಣ ಕುರಿತು ಮೇ 10ರಂದು ಸುತ್ತೋಲೆ ಹೊರಡಿಸಲಾಗಿತ್ತು. ಆಗ ಧ್ವನಿವರ್ಧಕ ಬಳಕೆಗೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿಗೆ ಪರವಾನಗಿ ನೀಡಲು ಎಷ್ಟು ಶುಲ್ಕ ವಿಧಿಸಬೇಕು ಎಂಬುದರ ಕುರಿತು ಸ್ಪಷ್ಟತೆ ಇರಲಿಲ್ಲ.

ಕಾಂಗ್ರೆಸ್‌ ಅಭ್ಯರ್ಥಿಗೆ ಮರಿತಿಬ್ಬೇಗೌಡ ಬೆಂಬಲ
ಮಂಡ್ಯ: ವಿಧಾನಪರಿಷತ್‌ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರಿಗೆ ಬೆಂಬಲ ನೀಡುವುದಾಗಿ ಜೆಡಿಎಸ್‌ ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಭಾನುವಾರ ಪ್ರಕಟಿಸಿದರು. ಆಪ್ತ ಕೀಲಾರ ಜಯರಾಮು ಅವರಿಗೆ ಜೆಡಿಎಸ್‌ ವರಿಷ್ಠರು ಟಿಕೆಟ್‌ ನಿರಾಕರಿಸಿದ ಕಾರಣ ಅವರು ಕೆಲ ತಿಂಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.