ಬೆಂಗಳೂರು: ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕುರಿತು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕೆಸರೆರಚಾಟ ಜೋರಾಗುತ್ತಿದೆ.
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ವಿಧಾನ ಮಂಡಲದ ಉಭಯ ಸದನದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಗ್ಗೆ ಕಾಂಗ್ರೆಸ್ ಪ್ರತಿರೋಧ ತೋರುತ್ತಿದೆ. ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡವನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸುತ್ತಿದೆಯೇ’ ಎಂದು ಪ್ರಶ್ನಿಸಿದೆ.
ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಕುರಿತು ಕಾಂಗ್ರೆಸ್ ನಾಯಕರು ಉಡಾಫೆಯ ಮಾತುಗಳನ್ನಾಡುವ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ವಾಸ್ತವವನ್ನು ಒಪ್ಪಿಕೊಳ್ಳಲೂ ಕಾಂಗ್ರೆಸ್ ಹಿಂಜರಿಯುತ್ತಿದೆ ಏಕೆಂದರೆ ಇದರ ರೂವಾರಿಗಳು ಅವರೇ ಆಗಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.