ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 16ರಂದು ಕಲಬುರಗಿ, 18ರಂದು ಶಿವಮೊಗ್ಗದಲ್ಲಿ ಹಮ್ಮಿಕೊಂಡಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
16 ಹಾಗೂ 18ರಂದು ಎರಡೂ ದಿನ ಮಧ್ಯಾಹ್ನ 2ಕ್ಕೆ ಕಾರ್ಯಕ್ರಮಗಳು ಆರಂಭವಾಗಲಿವೆ. ಕಲಬುರಗಿಯ ಎನ್‍ವಿ ಆಟದ ಮೈದಾನದಲ್ಲಿ ಹಾಗೂ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಮಾಹಿತಿ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎರಡು ದಿನಗಳ ಪ್ರವಾಸ ಮಾಡಿದ ನಂತರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿದಂತೆ ಹಲವು ಗಣ್ಯರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡುವರು ಎಂದು ಹೇಳಿದರು.
ಲೋಕಸಭಾ ಚುನಾವಣೆ ದೃಷ್ಟಿಯಿಂದ 28 ಲೋಕಸಭಾ ಕ್ಷೇತ್ರಗಳನ್ನು ಎಂಟು ಕ್ಲಸ್ಟರ್‌ಗಳಾಗಿ ವಿಂಗಡಿಸಲಾಗಿದೆ. ಪ್ರತಿ ಕ್ಲಸ್ಟರ್‌ಗೂ ವಿಭಿನ್ನ ಕಾರ್ಯಕ್ರಮ ಮತ್ತು ತಂತ್ರಗಾರಿಕೆ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಕೆಲ ಗಣ್ಯರು ಪ್ರಚಾರ ನಡೆಸಿದ್ದಾರೆ. ಎರಡನೇ ಹಂತದಲ್ಲಿ ದೊಡ್ಡ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.