ADVERTISEMENT

ಅಧಿಕಾರದ ವಿಚಾರ ನೋಡಿಕೊಳ್ಳಲು ಎಐಸಿಸಿ ಇದೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 23 ಮೇ 2023, 8:26 IST
Last Updated 23 ಮೇ 2023, 8:26 IST
   

ಬೆಂಗಳೂರು: ‘ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿ.ಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ’ ಎಂದು ಸಚಿವ ಎಂ. ಬಿ. ಪಾಟೀಲ ಅವರು ಸೋಮವಾರ ಹೇಳಿದ್ದರು.

ಈ ಬಗ್ಗೆ ಸುದ್ದಿಗಾರರ ಕೇಳಿದ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಶಿವಕುಮಾರ್‌, ‘ಎಲ್ಲ ವಿಚಾರಗಳನ್ನು ನೋಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ’ ಎಂದರು.

ADVERTISEMENT

ಇದನ್ನೂ ಓದಿ..

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿರುವೆ– ಎಂ.ಬಿ.ಪಾಟೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.