ADVERTISEMENT

5, 8 ಹಾಗೂ 9ನೇ ತರಗತಿಗಳಿಗೆ ಈ ವರ್ಷವೂ ಇಲ್ಲ ಬೋರ್ಡ್‌ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 15:47 IST
Last Updated 16 ಅಕ್ಟೋಬರ್ 2024, 15:47 IST
<div class="paragraphs"><p>ವಿಧಾನ ಸೌಧ</p></div>

ವಿಧಾನ ಸೌಧ

   

(ಸಾಂಕೇತಿಕ ಚಿತ್ರ)

ಬೆಂಗಳೂರು: 5, 8 ಹಾಗೂ 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಪೂರ್ಣಗೊಳ್ಳದ ಕಾರಣ 2024–25ನೇ ಸಾಲಿಗೂ ಹಿಂದೆ ಇದ್ದಂತೆ ಮೌಲ್ಯಾಂಕನವನ್ನೇ ಮುಂದುವರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

ADVERTISEMENT

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024–25ನೇ ಶೈಕ್ಷಣಿಕ ಸಾಲಿನಿಂದ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ–1 ಮತ್ತು ಭಾಗ–2ರ ಆಧಾರದಲ್ಲಿ ಮೌಲ್ಯಾಂಕನ ಪೂರ್ಣಗೊಳಿಸಲು ಎಲ್ಲ ಶಾಲೆಗಳಿಗೂ ಸುತ್ತೋಲೆ ಕಳುಹಿಸಲಾಗುತ್ತಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್‌ ಸಿಂಗ್ ಹೇಳಿದ್ದಾರೆ.

ಈ ಕುರಿತು ವಿಚಾರಣೆ ಮುಂದುವರಿಸಿದ್ದ ಸುಪ್ರೀಂಕೋರ್ಟ್‌, ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಅನುಮತಿಯಿಲ್ಲ ಎಂದಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.