ADVERTISEMENT

ಅಶ್ಲೀಲ ವಿಡಿಯೊ ಹರಿಬಿಟ್ಟ ಪ್ರಕರಣ: ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಪ್ರತೀಕ್ ಗೌಡ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜೂನ್ 2023, 7:25 IST
Last Updated 18 ಜೂನ್ 2023, 7:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯುವತಿಯರ ಅಶ್ಲೀಲ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಪ್ರತೀಕ್ ಗೌಡನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

‘ಸಂಘಟನೆಯ ಸದಸ್ಯತ್ವ ಪಡೆಯುವ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಅಮಿಷ ಒಡ್ಡಿ ನಗ್ನ ಚಿತ್ರಗಳು ಚಿತ್ರೀಕರಿಸಿಕೊಳ್ಳಲಾಗಿದೆ. ನಂತರ ಬೆದರಿಕೆ, ಬ್ಲಾಕ್‌ಮೇಲ್‌ ಮಾಡಲು ವಿಡಿಯೊ ಬಳಸಿಕೊಳ್ಳಲಾಗಿದೆ. ವಿದ್ಯಾರ್ಥಿನಿಯರು ಒಪ್ಪದಿದ್ದಾಗ, ಅಶ್ಲೀಲ ವಿಡಿಯೊಗಳನ್ನು ಪ್ರತೀಕ್ ವಾಟ್ಸ್‌ಆ್ಯಪ್‌ನಲ್ಲಿ ಹರಿಬಿಟ್ಟಿದ್ದ’ ಎಂದು ಹೇಳಲಾಗಿದೆ.

ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ADVERTISEMENT

ಓದಿ... ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ: ಕಾಂಗ್ರೆಸ್ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.