ಬೆಂಗಳೂರು: ‘ಇದು ಡಬಲ್ ಎಂಜಿನ್ ಸರ್ಕಾರ ಅಲ್ಲ ಟ್ರಬಲ್ ಎಂಜಿನ್ ಸರ್ಕಾರ‘ ಎಂದು ರಾಜ್ಯ ಕಾಂಗ್ರೆಸ್ ಘಟಕವು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
‘ತೆವಳುತ್ತಿವೆ ಹೆದ್ದಾರಿ ಕಾಮಗಾರಿ‘ ಎನ್ನುವ ಶೀರ್ಷಿಕೆಯಡಿ ಸೋಮವಾರ ‘ಪ್ರಜಾವಾಣಿ‘ಯ ಮುಖಪುಟದಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖ ಮಾಡಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
‘ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಪ್ರಯಾಣಿಕರಿಗೆ ತೊಂದರೆ ಕೊಡುವ ನರಕದ ದಾರಿಗಳಾಗಿವೆ. ಡಬಲ್ ಇಂಜಿನ್ ಸರ್ಕಾರವಿದ್ದರೂ, 25 ಬಿಜೆಪಿ ಸಂಸದರಿದ್ದರೂ ಅನುದಾನವಿಲ್ಲ, ಕಾಮಗಾರಿಗಳ ಪ್ರಗತಿ ಇಲ್ಲದಿರುವುದು ಬಿಜೆಪಿ ಸರ್ಕಾರಗಳ ನಿಷ್ಕ್ರಿಯತೆಗೆ ಹಿಡಿದ ಕನ್ನಡಿ. ಡಬಲ್ ಎಂಜಿನ್ ಸರ್ಕಾರವಲ್ಲ ಇದು ಟ್ರಬಲ್ ಎಂಜಿನ್ ಸರ್ಕಾರ‘ ಎಂದು ಕಿಡಿಕಾರಿದೆ.
ಅನುದಾನ ಕೊರತೆ, ಭೂಸ್ವಾಧೀನ ಸಮಸ್ಯೆ ಹಾಗೂ ಗುತ್ತಿಗೆದಾರರ ವಿಳಂಬ ಧೋರಣೆಯಿಂದಾಗಿ ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ತೆವಳುತ್ತಾ ಸಾಗುತ್ತಿವೆ ಎಂದು ಪ್ರಜಾವಾಣಿ ವಿಸ್ತೃತ ವರದಿ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.