ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ–ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣಗಳು ಇವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ 2014 ಹಾಗೂ 2015ರಲ್ಲಿ ಪ್ರಕರಣಗಳು ದಾಖಲಾಗಿವೆ. ಕೊಲೆ ಯತ್ನ, ಜೀವ ಬೆದರಿಕೆ, ಜಾತಿನಿಂದನೆ, ಹಲ್ಲೆ, ಹೆಣ್ಣುಮಕ್ಕಳಿಗೆ ಕೈಯಿಂದ ಹೊಡೆದು, ದೂಡಿದ ಆರೋಪಗಳ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.