ADVERTISEMENT

ತಿಂಗಳಿಗೆ ಮೂರು ಲೀಟರ್‌ ಸೀಮೆಎಣ್ಣೆ ವಿತರಣೆ: ಕತ್ತಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 17:46 IST
Last Updated 14 ಸೆಪ್ಟೆಂಬರ್ 2021, 17:46 IST
   

ಬೆಂಗಳೂರು:ಸಮರ್ಪಕ ವಿದ್ಯುತ್‌ ಸಂಪರ್ಕ ಹೊಂದಿಲ್ಲದ ಗ್ರಾಮೀಣ ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ವಾಸಿಸುತ್ತಿರುವ ಪಡಿತರ ಕುಟುಂಬಗಳಿಗೆ ದೀಪ ಉರಿಸುವ ಉದ್ದೇಶಕ್ಕೆ ವಿತರಿಸುತ್ತಿರುವ ಸೀಮೆಎಣ್ಣೆ ಪ್ರಮಾಣವನ್ನು 3 ಲೀಟರ್‌ಗಳಿಗೆ ಹೆಚ್ಚಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಉಮೇಶಕತ್ತಿ ತಿಳಿಸಿದರು.

ಪರಿಷತ್‌ನಲ್ಲಿ ಬಿಜೆಪಿಯ ಶಾಂತರಾಮ ಸಿದ್ದಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಅವರು,‘ಅಡುಗೆ ಅನಿಲ ಸಂಪರ್ಕ ಹೊಂದಿಲ್ಲದ ಪಡಿತರ ಕುಟುಂಬಗಳಿಗೆ ಅಡುಗೆಗಾಗಿ ತಿಂಗಳಿಗೆ ತಲಾ 3 ಲೀಟರ್‌ ಸೀಮೆಎಣ್ಣೆ ವಿತರಿಸಲಾಗುತ್ತಿದೆ. ಬೆಳಕಿಗಾಗಿ ದೀಪ ಉರಿಸಲು ಸದ್ಯ ತಲಾ ಒಂದು ಲೀಟರ್‌ ಸೀಮೆಎಣ್ಣೆ ನೀಡಲಾಗುತ್ತಿದ್ದು, ರಾಜ್ಯದಲ್ಲಿ 24,87,116 ಕುಟುಂಬಗಳು ಸೀಮೆಎಣ್ಣೆ ಪಡೆಯುತ್ತಿವೆ’ ಎಂದರು.

‘ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಿಗೆ ಸಮರ್ಪಕ ವಿದ್ಯುತ್‌ ಸಂಪರ್ಕ ಕಲ್ಪಿಸಲು ಕ್ರಮ ವಹಿಸಲಾಗು
ವುದು. ಖಾಸಗಿ ಪರವಾನಗಿದಾರರ ಮೂಲಕ ₹35ರ ದರದಲ್ಲೇ ಸೀಮೆಎಣ್ಣೆ ವಿತರಿಸಲಾಗುವುದು. ಉಜ್ವಲ ಮತ್ತು ಅನಿಲ ಭಾಗ್ಯ ಯೋಜನೆಯಡಿ ಎಲ್ಲ ಪಡಿ
ತರ ಕುಟುಂಬಗಳಿಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.