ADVERTISEMENT

ಒಳಮೀಸಲಾತಿ ಜಾರಿಗೆ ಸಿದ್ದರಾಮಯ್ಯ ಸರ್ಕಾರದ ಮೂವರು ಸಚಿವರು ಬಿಡುತ್ತಿಲ್ಲ: ಸುಧಾಕರ್

ಒಳಮೀಸಲಾತಿ ಜಾರಿಯನ್ನು ರಾಜ್ಯ ಸರ್ಕಾರದ ಮೂವರು ಸಚಿವರು ತಡೆದಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಆರೋಪಿಸಿದರು.

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 11:20 IST
Last Updated 21 ಅಕ್ಟೋಬರ್ 2024, 11:20 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಚಿಕ್ಕಬಳ್ಳಾಪುರ: ಒಳಮೀಸಲಾತಿ ಜಾರಿಯನ್ನು ರಾಜ್ಯ ಸರ್ಕಾರದ ಮೂವರು ಸಚಿವರು ತಡೆದಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಆರೋಪಿಸಿದರು. 

ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಈ ಹಿಂದೆ ಒಳಮೀಸಲಾತಿ ವಿಚಾರವಾಗಿ ತೀರ್ಮಾನಕೈಗೊಂಡಿತ್ತು. ಈಗ ಸುಪ್ರೀಂಕೋರ್ಟ್ ಹೇಳಿದರೂ ಒಳಮೀಸಲಾತಿ ಜಾರಿಗೊಳಿಸುತ್ತಿಲ್ಲ ಎಂದರು.

ಪರಿಶಿಷ್ಟರಲ್ಲಿ ಎಡಗೈ ಸಮಾಜಕ್ಕೆ ನ್ಯಾಯ ಕೊಡಬೇಕು. ಆದರೆ ರಾಜ್ಯ ಸರ್ಕಾರ ಆ ಕೆಲಸ ಮಾಡುತ್ತಿಲ್ಲ. ಇಂತಹವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.

ADVERTISEMENT

ಮೇಲ್ಜಾತಿಗಳನ್ನು ಹತ್ತಿಕ್ಕುವುರು ಜಾತಿ ಸಮೀಕ್ಷೆಯ ಉದ್ದೇಶ. ಮೇಲ್ಜಾತಿ ಮತ್ತು ಕೆಳಜಾತಿಗಳ ನಡುವೆ ಸಂಘರ್ಷ ಮೂಡಿಸುವ ಹುನ್ನಾರ ಇದು.ಯಾವುದೇ ಒಬ್ಬ ಸುಸಂಸ್ಕೃತ ರಾಜಕಾರಣಿ ಮಾಡುವ ಕೆಲಸ ಇದಲ್ಲ ಎಂದರು.

ಜಾತಿ ಸಮೀಕ್ಷೆ ನಡೆಸುವ ಯಾವ ಅಧಿಕಾರಿ, ಸಿಬ್ಬಂದಿಯೂ ನಮ್ಮ ಮನೆಗಳಿಗೆ ಬಂದಿಲ್ಲ. ವೈಜ್ಞಾನಿಕವಾಗಿ ಜಾತಿಗಣತಿ ನಡೆಯಲಿ. ಇದರಿಂದ ಯಾರಿಗೆ ಅವಕಾಶ ಸಿಗಬೇಕೊ ಅವರಿಗೆ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.