ADVERTISEMENT

ಅಬಕಾರಿ ಸಚಿವ ತಿಮ್ಮಾಪುರ ವಜಾಕ್ಕೆ ವಿ.ಸುನಿಲ್‌ಕುಮಾರ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 16:13 IST
Last Updated 5 ನವೆಂಬರ್ 2024, 16:13 IST
<div class="paragraphs"><p>ಸಚಿವ ಆರ್.ಬಿ. ತಿಮ್ಮಾಪುರ</p></div>

ಸಚಿವ ಆರ್.ಬಿ. ತಿಮ್ಮಾಪುರ

   

ಬೆಂಗಳೂರು: ‘ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಅವರು ವರ್ಗಾವಣೆ, ಲೈಸನ್ಸ್‌ಗೆ ಕಾಸು ಮತ್ತು ಸನ್ನದುದಾರರಿಂದ ತಿಂಗಳ ವಸೂಲಿ ಮೂಲಕ ವರ್ಷಕ್ಕೆ ₹500 ಕೋಟಿ ಸಂಗ್ರಹಿಸುತ್ತಿದ್ದಾರೆ ಎಂದು ಮದ್ಯ ಮಾರಾಟಗಾರರ ಸಂಘವು ಆರೋಪಿಸಿದೆ. ಆದ್ದರಿಂದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು’ ಎಂದು ಬಿಜೆಪಿ ಪ್ರಧಾನಕಾರ್ಯದರ್ಶಿ ವಿ.ಸುನಿಲ್‌ಕುಮಾರ್ ಒತ್ತಾಯಿಸಿದ್ದಾರೆ.

‘ಹಲೋ ಅಪ್ಪಾ. . ಎಂಬಲ್ಲಿಂದ ಪ್ರಾರಂಭವಾದ ರಾಜ್ಯ ಸರ್ಕಾರದ ವರ್ಗಾವಣೆ ವ್ಯವಹಾರ ಈಗ ಅಬಕಾರಿ ಸಚಿವ ತಿಮ್ಮಾಪುರವರೆಗೆ ಬಂದು ನಿಂತಿದೆ’ ಎಂದು ಅವರು ಆರೋಪಿಸಿದ್ದಾರೆ.

ADVERTISEMENT

‘ಸಿದ್ದರಾಮಯ್ಯ ಅವರೇ ‘ಮಂತ್ಲಿ ಕಲೆಕ್ಟರ್‌’ ತಿಮ್ಮಾಪುರ ಅವರನ್ನು ಸಂಪುಟದಿಂದ ಕಿತ್ತೊಗೆಯುತ್ತೀರೋ ಅಥವಾ ವರಿಷ್ಠರ ರಾಜಸ್ವ ಕೊರತೆ ನೀಗಿಸಲು ಪಾಲು ಕೇಳುತ್ತೀರೋ’ ಎಂದು ಪ್ರಶ್ನಿಸಿದ್ದಾರೆ.

ರೈತರ ಆಸ್ತಿ ಕಬಳಿಕೆ ಷಡ್ಯಂತ್ರ

ವಕ್ಫ್‌ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಸುನಿಲ್‌ಕುಮಾರ್ ಆರೋಪಿಸಿದರು.

‘ಈ ಹಿಂದೆ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು 21,767 ಎಕರೆ ವಕ್ಫ್‌ ಭೂಮಿ ವಶಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದರು. ಈ ಸಂಬಂಧ ಕಂದಾಯ ಹಾಗೂ ವಕ್ಫ್‌ ಇಲಾಖೆ ಜಂಟಿ ಸಭೆ ನಡೆಸಿತ್ತು. ಸಿದ್ದರಾಮಯ್ಯನವರ ಸೂಚನೆ ಇಲ್ಲದೇ ಅಧಿಕಾರಿಗಳು ಇಂಥ ದರಿದ್ರ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿತ್ತೇ’ ಎಂದೂ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.