ರಾಜ್ಯ, ದೇಶ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ(87) ಸೋಮವಾರ ಮಧ್ಯರಾತ್ರಿ ದಾರದಹಳ್ಳಿಯ ತಮ್ಮ ನಿವಾಸ ‘ಪೂರ್ಣಚಂದ್ರ’ದಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾದರು.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ರಾಜ್ಯಕ್ಕೆ ಕೂಡಲೇ ಅಗತ್ಯ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
₹37 ಸಾವಿರ ಕೋಟಿ ಬೆಳೆ ನಷ್ಟ: ಪರಿಹಾರಕ್ಕಾಗಿ ಕೇಂದ್ರಕ್ಕೆ ಪತ್ರ– ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ವೇತನ ಪಾವತಿಸಲು ಮತ್ತು ವೇತನ ಪರಿಷ್ಕರಣೆಗೂ ಸರ್ಕಾರದ ಬಳಿ ಹಣವಿಲ್ಲ. ಆದ್ದರಿಂದ ವೇತನ ಆಯೋಗದ ಅವಧಿಯನ್ನು ವಿಸ್ತರಿಸಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಈ ಬಾರಿಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಮಾದರಿಯಾಗಲಿದೆ. ಉತ್ತರ ಕರ್ನಾಟಕದ ಜನರಿಗೆ ಸಮಾಧಾನ, ಸಂತೃಪ್ತಿ ತರುವ ಭರವಸೆ ಇದೆ’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಕಿಯೋನಿಕ್ಸ್ ಭ್ರಷ್ಟಾಚಾರ, ಕೆಇಎ ಪರೀಕ್ಷಾ ವ್ಯಾಪಕ ಅಕ್ರಮಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆಯವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಅವರು ಒತ್ತಾಯಿಸಿದರು.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಕಿಯೋನಿಕ್ಸ್, KEA ಪರೀಕ್ಷಾ ಅಕ್ರಮ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
ನಾವು ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದ್ದೆವು. ಅದು ಈಗ ಆಗುತ್ತಿದೆ. ಮೋದಿಯಿಂದಾಗಿ ಇದು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ನಮ್ಮಿಂದಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವಾಗಿದೆ: ಪ್ರಧಾನಿ ಮೋದಿ
ದೀಪಾವಳಿ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ತನ್ನ ಹಿಂದಿನ ಆದೇಶ ಪಾಲಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ದೇಶದ ಮೊದಲ ರಾಷ್ಟ್ರಪತಿಯಾಗಿ ಸ್ಪರ್ಧಿಸಿದ್ದ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ವಿರೋಧಿಸಿತ್ತು. ಕಾಂಗ್ರೆಸ್ ಪಕ್ಷದವರು ನನ್ನನ್ನು ನಿಂದಿಸುವುದನ್ನು ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ವಿರೋಧಿಸಿತ್ತು: ಮೋದಿ
ಕದನ ವಿರಾಮ ನಿರ್ಣಯವನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ನೆರವು ಸಾಮಾಗ್ರಿಗಳ ಪ್ರವೇಶ ಮತ್ತು ಒತ್ತೆಯಾಳುಗಳ ನಿರ್ಗಮನಕ್ಕೆ ಅನುಕೂಲವಾಗುವಂತೆ ಕದನಕ್ಕೆ ಸಣ್ಣ ವಿರಾಮ ನೀಡುವುದಾಗಿ ತಿಳಿಸಿದ್ದಾರೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಕೀನ್ಯಾ ಮತ್ತು ಸೊಮಾಲಿಯಾ ದೇಶಗಳಲ್ಲಿ ಭಾರಿ ಮಳೆ ಮತ್ತು ದಿಢೀರ್ ಪ್ರವಾಹದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹತ್ತಾರು ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ ಎಂದು ಪರಿಹಾರ ಕಾರ್ಯದಲ್ಲಿ ತೊಡಗಿರುವ ಸಂಸ್ಥೆಗಳು ತಿಳಿಸಿವೆ.
ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ಕಿಸಿ
ಕೀನ್ಯಾ–ಸೊಮಾಲಿಯಾದಲ್ಲಿ ಭಾರಿ ಮಳೆ: ಹಠಾತ್ ಪ್ರವಾಹ– 30ಕ್ಕೂ ಅಧಿಕ ಮಂದಿ ಸಾವು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.