ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯ 680 ಎಕರೆ ಮಾರಾಟ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿಲ್ಲ ಎಂದು ಹಣಕಾಸು ಇಲಾಖೆ ಮತ್ತು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಸ್ಪಷ್ಟನೆ ನೀಡಿರುವ ಅವರು, ಸಚಿವ ಸಂಪುಟ ಪ್ರವಾಸೋದ್ಯಮ ನೀತಿಗೆ ಒಪ್ಪಿಗೆ ನೀಡಿದ್ದು, ಪ್ರವಾಸೋದ್ಯಮ ಇಲಾಖೆಗೆ ಸೇರಿದ 680 ಎಕರೆ ಭೂಮಿ ನಗದೀಕರಣ ಮಾಡಿ, ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯ ಯೋಜನೆಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ನಗದೀಕರಣ ಎಂದರೆ ಮಾರಾಟ ಮಾಡುವುದಲ್ಲ. ಖಾಸಗಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶಕ್ಕಾಗಿ ಭೂಮಿಯನ್ನು ಬಳಸಿಕೊಳ್ಳುವುದು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.