ಬೆಂಗಳೂರು: 2023–24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಜುಲೈ 3ರವರೆಗೆ ವಿಸ್ತರಿಸಲಾಗಿದೆ.
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸರ್ಕಾರಿ ನೌಕರರ ವರ್ಗಾವಣೆಗೆ ಮೇ 30ರಂದು ಆದೇಶ ಹೊರಡಿಸಿತ್ತು. ಜೂನ್ 30ರವರೆಗೆ ಅವಕಾಶ ನೀಡಲಾಗಿತ್ತು. ಹಲವು ನೌಕರರ ಸಂಘಟನೆಗಳ ಮನವಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.