ಬೆಂಗಳೂರು: ರಾಜ್ಯದ ವಿವಿಧ ಭಾಗಗಳ ಏಳು ಡಿವೈಎಸ್‌ಪಿ ಹಾಗೂ 55 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ವರ್ಗಾವಣೆ ಮಾಡಲಾಗಿದೆ.
ಡಿವೈಎಸ್‌ಪಿಗಳಾದ ಕೆ.ಎಂ.ಸತೀಶ್ ಅವರನ್ನು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗ ಹಾಗೂ ಗೋಪಾಲ್ ನಾಯಕ್ ಅವರನ್ನು ಬೆಂಗಳೂರಿನ ಬಿಎಂಟಿಎಫ್‌ಗೆ ವರ್ಗಾವಣೆ ಮಾಡಲಾಗಿದೆ. ಉಳಿದ ಡಿವೈಎಸ್‌ಪಿಗಳನ್ನು ಇತರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಇನ್‌ಸ್ಪೆಕ್ಟರ್‌ಗಳ ಪೈಕಿ ಜೆ.ಎಂ. ರೇಣುಕಾ ಅವರನ್ನು ವೈಟ್‌ಫೀಲ್ಡ್ ಠಾಣೆಗೆ ಹಾಗೂ ಲಿಂಗರಾಜು ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.