ADVERTISEMENT

ವರ್ಗಾವಣೆ: ಜೂನ್ 30ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2023, 17:26 IST
Last Updated 16 ಜೂನ್ 2023, 17:26 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: 2023–24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದೆ.

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸರ್ಕಾರಿ ನೌಕರರ ವರ್ಗಾವಣೆಗೆ ಮೇ 30ರಂದು ಆದೇಶ ಹೊರಡಿಸಿತ್ತು. ಜೂನ್‌ 15ರ ವರೆಗೆ ಅವಕಾಶ ನೀಡಲಾಗಿತ್ತು. ಹಲವು ನೌಕರರ ಸಂಘಟನೆಗಳ ಮನವಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲಾಗಿದೆ. ಉಳಿದಂತೆ ಮೇ 30ರ ಆದೇಶದಲ್ಲಿನ ಎಲ್ಲ ನಿಯಮಗಳು ಅನ್ವಯವಾಗಲಿವೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT