ADVERTISEMENT

ತುಮಕೂರು ಹಾಸ್ಟೆಲ್‌ನಲ್ಲಿ ಅಕ್ಕಿ ದಾಸ್ತಾನಿದೆ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 16:00 IST
Last Updated 18 ಫೆಬ್ರುವರಿ 2024, 16:00 IST
ಶಿವರಾಜ್ ತಂಗಡಗಿ
ಶಿವರಾಜ್ ತಂಗಡಗಿ   

ಬೆಂಗಳೂರು:‘ತುಮಕೂರು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದೆ. ಯಾವುದೇ ಕೊರತೆ ಇಲ್ಲ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ.

‘ತುಮಕೂರು ಜಿಲ್ಲೆಯಲ್ಲಿ 111 ಹಾಸ್ಟೆಲ್‌ಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ವಿದ್ಯಾರ್ಥಿಗಳ ಮಾಸಿಕ ಬೇಡಿಕೆಗಳಿಗೆ ಅನುಗುಣವಾಗಿ ಅಕ್ಕಿ ಮತ್ತು ಗೋಧಿ ಹಂಚಿಕೆಯಾಗಿರುತ್ತದೆ.‌ ಅಕ್ಕಿ ಇಲ್ಲ ಎಂಬ ವದಂತಿ ಬೆನ್ನಲ್ಲೇ ತುಮಕೂರಿನ ಹಿಂದುಳಿದ ವರ್ಗದ ಜಿಲ್ಲಾ ಕಲ್ಯಾಣ ಅಧಿಕಾರಿಯಿಂದ ಕೂಡ ಮಾಹಿತಿ ಪಡೆದಿದ್ದೇನೆ. ಅಕ್ಕಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದರು.‌

‘ಆಹಾರ ಇಲಾಖೆಯ ಪ್ರಧಾನ‌ ಕಾರ್ಯದರ್ಶಿ ಜೊತೆಗೂ ಚರ್ಚೆ ನಡೆಸಿದ್ದೇನೆ. ಅಕ್ಕಿ‌ ಮತ್ತು ಗೋಧಿ ಪೂರೈಕೆಯಲ್ಲಿ ಸಮಸ್ಯೆ ಇಲ್ಲ ಎಂದು ಅವರೂ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿಲಯಗಳಿಗೆ ಪ್ರಥಮ ಆದ್ಯತೆಯಲ್ಲಿ‌ ಆಹಾರಧಾನ್ಯ ಪೂರೈಕೆ ಮಾಡುವಂತೆ‌ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲು ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ’ ಎಂದು ಅವರು ಹೇಳಿದ್ದಾರೆ.‌

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.