ADVERTISEMENT

ತುಂಗಭದ್ರಾ ಜಲಾಶಯ: ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2024, 8:33 IST
Last Updated 11 ಆಗಸ್ಟ್ 2024, 8:33 IST
   

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ತುಂಡಾದ ಘಟನೆ ಕುರಿತಂತೆ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.

ಮುಖ್ಯಮಂತ್ರಿ ಅವರು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಭಾನುವಾರ ಬೆಳಿಗ್ಗೆ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.

ADVERTISEMENT

ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಜೊತೆಗೂ ಮುಖ್ಯಮಂತ್ರಿ ಚರ್ಚೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.