ಉಡುಪಿ: ಹೆಬ್ರಿ ತಾಲ್ಲೂಕಿನ ಪೀತ್‌ಬೈಲಿನಲ್ಲಿ ಎಎನ್‌ಎಫ್ ನವರು ನಡೆಸಿದ ಎನ್ ಕೌಂಟರ್ ನಲ್ಲಿ ಹತನಾದ ಹೆಬ್ರಿ ತಾಲ್ಲೂಕಿನ ಕೂಡ್ಲವಿನ ವಿಕ್ರಂ ಗೌಡನ ವಿರುದ್ದ ಕೊಲೆ ಪ್ರಕರಣವೂ ಸೇರಿದಂತೆ 61 ಪ್ರಕರಣಗಳು ದಾಖಲಾಗಿದ್ದವು ಎಂದು ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಡಿ.ರೂಪ ತಿಳಿಸಿದರು.
ಈತನ ವಿರುದ್ಧ ಕೇರಳದಲ್ಲೂ 19 ಪಕರಣಗಳು ದಾಖಲಾಗಿವೆ ಎಂದರು. 15 ದಿನಗಳಿಂದಲೂ ಶೋಧ ಕಾರ್ಯಾಚರಣೆ ನಡೆಯುತ್ತಿತ್ತು ಎಂದೂ ಹೇಳಿದರು.
ಮಾಧ್ಯಮದವರನ್ನು ಘಟನಾ ಸ್ಥಳದಿಂದ ಒಂದು ಕಿ.ಮೀ ದೂರದಲ್ಲೇ ಪೊಲೀಸರು ತಡೆದರು.
ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಮ್ ಗೌಡ ಹತನಾಗಿದ್ದಾನೆ.
ಸೋಮವಾರ ರಾತ್ರಿ ಐದು ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ಬಂದಿದ್ದ ವೇಳೆ ಎಎನ್ಎಫ್ ತಂಡ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ವಿಕ್ರಮ್ ಹತನಾಗಿದ್ದು, ಉಳಿದವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.