ADVERTISEMENT

Udupi ಶೌಚಾಲಯದಲ್ಲಿ ವಿಡಿಯೊ; ಪೊಲೀಸರು ಒತ್ತಡಕ್ಕೆ ಮಣಿಯುತ್ತಿದ್ದಾರೆ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2023, 12:39 IST
Last Updated 26 ಜುಲೈ 2023, 12:39 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಉಡುಪಿ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಇಟ್ಟು ಚಿತ್ರಗಳನ್ನು ತೆಗೆಯುವುದು ಹೇಯ ಕೃತ್ಯ . ಈ ಪ್ರಕರಣದಲ್ಲಿ ಪೊಲೀಸರು ಅಧಿಕಾರಸ್ಥರ ಒತ್ತಡಕ್ಕೆ ಮಣಿಯುತ್ತಿದ್ದಾರೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ಟ್ವೀಟ್‌ ಮಾಡಿರುವ ಯುವತಿಯ ವಿರುದ್ಧವೇ ತನಿಖೆ ಮಾಡುವ ರೀತಿ ಪೊಲೀಸರು ನಡೆದುಕೊಳ್ಳುತ್ತಿದ್ದು, ಅವರು ಯಾರ ಅಣತಿಯಂತೆ ನಡೆಯುತ್ತಿದ್ದಾರೆ ಎಂದು ಬೊಮ್ಮಾಯಿ ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.  

ಮೊಬೈಲ್‌ ಅನ್ನು ಸೀಜ್‌ ಮಾಡಿ ಹೆಚ್ಚಿನ ತನಿಖೆ ನಡೆಸಬೇಕು. ಅದೇನು ದೊಡ್ಡ ಪ್ರಕರಣ ಅಲ್ಲ ಅಂತ ಗೃಹ ಸಚಿವರು ಹೇಳುತ್ತಿದ್ದಾರೆ. ಆದರೆ, ಕಾಲೇಜಿನ ಆಡಳಿತ ವರ್ಗ ಮಧ್ಯ ಪ್ರವೇಶಿಸಿ ದೃಶ್ಯಾವಳಿಗಳನ್ನು ತೆಗೆಸಿ ಹಾಕಿದೆ. ಕಾಲೇಜು ಅವರನ್ನು ಅಮಾನತು ಮಾಡಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ತಪ್ಪೊಪ್ಪಿಗೆ ಒಂದೇ ಸಾಕು ಎಂದು ಹೇಳಿದರು.

ADVERTISEMENT

ಈ ಪ್ರಕರಣದಲ್ಲಿ ಏನೂ ಒಲ್ಲ ಎಂದು ಹೇಳುವುದಾದರೆ, ಪೊಲೀಸರಿಂದ ರಕ್ಷಣೆ ಸಿಗುವುದಿಲ್ಲ ಎನ್ನುವ ಭಾವನೆ ಮೂಡಲಿದೆ. ಹಿರಿಯ ಅಧಿಕಾರಿಗಳು ಕಾನೂನು ಪ್ರಕಾರ ನಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು. ಕೆಳಗಿನ ಅಧಿಕಾರಿಗಳು ಒತ್ತಡಕ್ಕೆ ಮಣಿದು ಕೆಲಸ ಮಾಡಿದ್ದ ಅಂತಹ ಅಧಿಕಾರಿಗಳ ವಿರುದ್ಧ ಹಿರಿಯ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು. ತಗ್ಗಿ ಬಗ್ಗಿ ನಡೆದರೆ, ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಕಡಿಮೆ ಆಗಿದೆ ಎಂದರು.

ಇದು ಫೇಕ್‌ ನ್ಯೂಸ್‌ ಎಂದು ಗೃಹ ಸಚಿವರು ಹೇಳಿದ್ದಾರೆ. ಹಾಗಾದರೆ. ಕಾಲೇಜಿ ವಿದ್ಯಾರ್ಥಿಗಳು ತಪ್ಪೊಪ್ಪಿಗೆ ಯಾಕೆ ಕೊಟ್ಟಿದ್ದಾರೆ. ಅವರನ್ನು ಯಾಕೆ ಅಮಾನತು ಮಾಡಿದರು. ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.