ಬೆಂಗಳೂರು: ‘ಯುಜಿ ನೀಟ್- 24 ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆ ಆಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಸಹಿತ ಸಂಬಂಧಪಟ್ಟ ಕಾಲೇಜುಗಳಿಗೆ ತೆರಳಿ ವರದಿ ಮಾಡಿಕೊಳ್ಳಬೇಕು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
‘ಈ ಅಭ್ಯರ್ಥಿಗಳು ದಾಖಲೆಗಳನ್ನು ಸಲ್ಲಿಸಲು ಸೋಮವಾರ (ಅ.21) ಕೆಇಎ ಕಚೇರಿಗೆ ಬರುವ ಅಗತ್ಯ ಇಲ್ಲ. ಶುಲ್ಕ ಪಾವತಿ ಮಾಡುವುದಕ್ಕೆ ಮತ್ತು ಕಾಲೇಜಿಗೆ ದಾಖಲೆಗಳನ್ನು ಸಲ್ಲಿಸಿ ವರದಿ ಮಾಡಿಕೊಳ್ಳಲು ಮಂಗಳವಾರದವರೆಗೆ (ಅ. 22) ಅವಕಾಶವಿದೆ. ಮೂಲ ದಾಖಲೆಗಳನ್ನು ಸಲ್ಲಿಸಲು ಕೆಇಎಗೆ ಬರುವಂತೆ ಈ ಹಿಂದೆ ಸೂಚಿಸಲಾಗಿತ್ತು’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.