ADVERTISEMENT

ಯುಜಿನೀಟ್: ಆನ್‌ಲೈನ್ ಅರ್ಜಿ ಸಲ್ಲಿಸಲು 23ರವರೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 23:39 IST
Last Updated 20 ಅಕ್ಟೋಬರ್ 2024, 23:39 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಯುಜಿ ವೈದ್ಯಕೀಯ ಸ್ಟ್ರೇ ವೇಕೆನ್ಸಿ ಸುತ್ತಿಗೆ ಲಭ್ಯವಾಗುವ ಸೀಟುಗಳಿಗೆ ಹಾಗೂ ಯುಜಿ ದಂತ ವೈದ್ಯಕೀಯ, ಆಯುಷ್ ಕೋರ್ಸುಗಳ ಪ್ರವೇಶಾತಿಗಾಗಿ ಮಾಪ್ ಅಪ್ ಸುತ್ತಿಗೆ ಅರ್ಹತೆ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 21ರಿಂದ  23ರ ರಾತ್ರಿ 11.59ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಈವರೆಗೆ ಯುಜಿನೀಟ್-2024ಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಯುಜಿ ವೈದ್ಯಕೀಯ ಸ್ಟ್ರೇ ವೇಕೆನ್ಸಿ ಸುತ್ತಿಗೆ ಲಭ್ಯವಾಗುವ ಸೀಟುಗಳಿಗೆ ಮತ್ತು ದಂತ ವೈದ್ಯಕೀಯ-ಆಯುಷ್ ಕೋರ್ಸುಗಳ ಪ್ರವೇಶಾತಿಗಾಗಿ ಮಾಪ್ ಅಪ್ ಸುತ್ತಿನಲ್ಲಿ ಲಭ್ಯವಾಗುವ ಸೀಟುಗಳಿಗೆ ಮಾತ್ರ ಇತರ ಅರ್ಹ ಅಭ್ಯರ್ಥಿಗಳ ಜೊತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಆನ್ ಲೈನ್ ಲಿಂಕ್ ತೆರೆಯಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಹಾಗು ಶುಲ್ಕ ಪಾವತಿಸಬಹುದು. ಈಗಾಗಲೇ ನೊಂದಾಯಿಸಿರುವ, ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸದೇ ಇರುವ ಅಭ್ಯರ್ಥಿಗಳೂ ಅರ್ಜಿಯನ್ನು ಪೂರ್ಣವಾಗಿ ಸಲ್ಲಿಸಬಹುದು ಎಂದಿದ್ದಾರೆ.

ADVERTISEMENT

ಯುಜಿನೀಟ್-2024ರಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ಲಭ್ಯವಿರುವ ಸೀಟುಗಳಿಗೆ ಪ್ರಾಧಿಕಾರದ ಮೂಲಕ ಪ್ರವೇಶಕ್ಕೆ ನೋಂದಣಿ ಮಾಡಿಕೊಳ್ಳಲು ಅರ್ಹರಿರುತ್ತಾರೆ ಎಂದೂ ಅವರು ವಿವರಿಸಿದ್ದಾರೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.