ಬೆಂಗಳೂರು: ನಾರಾಯಣಪುರ ಬಲದಂಡೆ ಕಾಮಗಾರಿಗಳ ಹೆಸರಿನಲ್ಲಿ ₹ 200 ಕೋಟಿಗೂ ಹೆಚ್ಚು ಮೊತ್ತದ ನಕಲಿ ಬಿಲ್ ಸೃಷ್ಟಿಸಿ, ಹಣ ಪಾವತಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಆರೋಪಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುತ್ತಿಗೆದಾರ ಎನ್.ಡಿ. ವಡ್ಡರ್ ಅವರಿಗೆ ನಕಲಿ ಬಿಲ್ ಮೂಲಕ ₹ 200 ಕೋಟಿ ಪಾವತಿಸಿರುವ ಕುರಿತು ಬಿಜೆಪಿ ಶಾಸಕ ಶಿವನಗೌಡ ನಾಯಕ ಅಧಿಕಾರಿಯೊಬ್ಬರ ಜತೆ ಮಾತನಾಡಿದ್ದಾರೆ. ಬಿಲ್ ಬರೆಯುವ ಮೊದಲು ನನ್ನನ್ನು ಏಕೆ ಕೇಳಿಲ್ಲ ಎಂಬುದೂ ಆಡಿಯೊ ತುಣುಕಿನಲ್ಲಿದೆ’ ಎಂದರು.
ಈ ಅಕ್ರಮದ ಕುರಿತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು. ಎರಡು ಪ್ಯಾಕೇಜ್‌ಗಳ ಅಡಿಯಲ್ಲಿ ಎನ್.ಡಿ. ವಡ್ಡರ್ ಎಂಬ ಗುತ್ತಿಗೆದಾರರಿಗೆ ₹ 1,619 ಕೋಟಿ ಮೊತ್ತದ ಕಾಮಗಾರಿಗಳ ಗುತ್ತಿಗೆ ನೀಡಲಾಗಿತ್ತು. ಈಗಾಗಲೇ ₹ 425 ಕೋಟಿ ಬಿಲ್ ಪಾವತಿಸಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.