ಬೆಂಗಳೂರು: ‘ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ತಲುಪಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ‘ಸೋಮವಾರ ಬೆಳಗಿನ ಜಾವ 3 ಗಂಟೆಗೆನವೀನ್ ಅವರ ಪಾರ್ಥಿವ ಶರೀರ ವಿಮಾನ ನಿಲ್ದಾಣಕ್ಕೆ ತಲುಪಲಿದೆ’ ಎಂದರು.
ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ಸಂಭವಿಸಿದ ಬಾಂಬ್‌ದಾಳಿಯಲ್ಲಿ ಹಾವೇರಿ ಜಿಲ್ಲೆಯ ಯುವಕ ನವೀನ್ ಮೃತಪಟ್ಟಿದ್ದರು.
ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಒಂದು ವಾರ ಕಾಲ ಬಂಕರ್‌ನಲ್ಲಿ ಇದ್ದ ಅವರು ಹೊರಗೆ ಬಂದಾಗ ಬಾಂಬ್ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.