ADVERTISEMENT

ಉಮೇಶ್‌ ರೆಡ್ಡಿ ಅರ್ಜಿ 6ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2018, 15:37 IST
Last Updated 2 ಆಗಸ್ಟ್ 2018, 15:37 IST

ಬೆಂಗಳೂರು: ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಕೋರಿ ವಿಕೃತ ಕಾಮಿ ಉಮೇಶ್‌ ರೆಡ್ಡಿ ಸಲ್ಲಿಸಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು ಹೈಕೋರ್ಟ್‌ ಇದೇ 6ಕ್ಕೆ ಮುಂದೂಡಿದೆ.

ಉಮೇಶ್ ರೆಡ್ಡಿ ಅಲಿಯಾಸ್‌ ಬಿ.ಎ.ಉಮೇಶ್‌ ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ರಾಘವೇಂದ್ರ ಎಸ್‌.ಚೌಹಾಣ್ ಹಾಗೂ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠವು ಬುಧವಾರ ವಿಚಾರಣೆ ನಡೆಸಿತು.

ಈ ಅರ್ಜಿಯ ವಿಚಾರಣೆ 6ರಿಂದ ಪ್ರತಿದಿನ ನಡೆಯಲಿದೆ.

ADVERTISEMENT

ಆಕ್ಷೇಪಣೆ ಏನು?: ‘ನಾನು ಈಗಾಗಲೇ 18 ವರ್ಷ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದೇನೆ. ಇದರಲ್ಲಿ 10 ವರ್ಷ ಏಕಾಂತ ಸೆರೆವಾಸ ಪೂರೈಸಿದ್ದೇನೆ. ಈ ಸಮಯದಲ್ಲಿ ನಾನು ಮಾನಸಿಕ ರೋಗದಿಂದ ನರಳಿದ್ದೇನೆ. ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿದ್ದ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದಾರೆ. ಇದು ಕಾನೂನು ಬಾಹಿರ ಎಂದು ಘೋಷಿಸಬೇಕು. ಸಂವಿಧಾನದ 21ನೇ ವಿಧಿಯ ಅನುಸಾರ ನನ್ನ ಜೀವಕ್ಕೆ ರಕ್ಷಣೆ ನೀಡಬೇಕು’ ಎಂದು ಕೋರಿ ಉಮೇಶ್‌ ರೆಡ್ಡಿ ಈ ಅರ್ಜಿ ಸಲ್ಲಿಸಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.